ವಿಷಯಕ್ಕೆ ಹೋಗು

ಧರೆಯ ಮೇಲಣ ಜನಿತಕ್ಕೆ

ವಿಕಿಸೋರ್ಸ್ದಿಂದ


ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya


ಧರೆಯ ಮೇಲಣ ಜನಿತಕ್ಕೆ ಉರಗನ ಅಧರಪಾನ. ನಖಕಂಕಣ (ನ ಖ ಕಂ ಕ ಣ ?) ಮುಖ ಮೂವತ್ತೊಂದು ಶಿರವ ನುಂಗಿತ್ತು ನೋಡಾ ! ಉತ್ತರಾಪಥದ ಕೊಡಗೂಸು ಈಶಾನ್ಯದ ಒಡಲೊಳಗೆ ಅಡಗಿ
ಸಾಕಾರದ ಸಂಗವ ನುಂಗಿದ ಭಾಷೆಯನರಿಯದ ಮುಗ್ಧೆ ! ಅರಿವಿನೊಳಗಣ ಮರಹು
ಮರಹಿನೊಳಗಣ ಅರಿವು ಗುಹೇಶ್ವರಲಿಂಗವು ತ್ರಿಕಾಲ ಪೂಜೆಯ ನುಂಗಿತ್ತು.