ಧರ್ಮಾರ್ಥವಾಗಿ ದೀಕ್ಷೆಯ ಮಾಡಬೇಕಲ್ಲದೆ
ಆಶಾರ್ಥವಾಗಿ ದೀಕ್ಷೆಯ ಮಾಡಲಾಗದಯ್ಯ. ಜ್ಞಾನಾರ್ಥವಾಗಿ ಶಾಸ್ತ್ರವನೋದಬೇಕಲ್ಲದೆ
ವಾದಾರ್ಥವಾಗಿ ಶಾಸ್ತ್ರವನೋದಲಾಗದಯ್ಯ. ಮೋಕ್ಷಾರ್ಥವಾಗಿ ಶಿವಪೂಜೆಯ ಮಾಡಬೇಕಲ್ಲದೆ
ಡಂಭಾರ್ಥವಾಗಿ ಶಿವಪೂಜೆಯ ಮಾಡಲಾಗದಯ್ಯ. ಅದೆಂತೆಂದೊಡೆ : ``ಆಶಾರ್ಥಂ ದೀಯತೇ ದೀಕ್ಷಾ ದಂಭಾರ್ಥಂ ಪೂಜ್ಯತೇ ಶಿವಃ