ಧೂಪ ದೀಪಾರತಿಯ ಬೆಳಗುವಡೆ,

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಧೂಪ ದೀಪಾರತಿಯ ಬೆಳಗುವಡೆ
ನೀನು ಸ್ವಯಂಜ್ಯೋತಿಪ್ರಕಾಶನು. ಅರ್ಪಿತವ ಮಾಡುವಡೆ
ನೀನು ನಿತ್ಯತೃಪ್ತನು. ಅಷ್ಟವಿಧಾರ್ಚನೆಯ ಮಾಡುವಡೆ
ನೀನು ಮುಟ್ಟಬಾರದ ಘನವೇದ್ಯನು. ನಿತ್ಯನೇಮಂಗಳ ಮಾಡುವಡೆ ನಿನಗೆ ಅನಂತನಾಮಂಗಳಾದವು ಗುಹೇಶ್ವರಾ.