ವಿಷಯಕ್ಕೆ ಹೋಗು

ಧ್ಯಾನಕ್ಕೆ ಮೋನವೆಂಬ ಶಸ್ತ್ರವ

ವಿಕಿಸೋರ್ಸ್ದಿಂದ


ಲೇಖಕರು: ಬಸವಣ್ಣ
ಶೀರ್ಷಿಕೆ: vachana saahitya
ವರ್ಷ: 1191 AD
ಪ್ರಕಾಶಕರು: anubhava mantapa
ಮೂಲ: vachana saahitya

ಧ್ಯಾನಕ್ಕೆ ಮೋನವೆಂಬ ಶಸ್ತ್ರವ ಪಿಡಿಯಲರಿಯದೆ ಅಹಂಕಾರದ ಧಾರೆಯ ಮೊನೆಯಲಗೆಂಬ ಶಸ್ತ್ರವ ಪಿಡಿದು ಕೆಟ್ಟೆನಯ್ಯಾ ಅಂಜುವೆನಂಜುವೆನಯ್ಯಾ
ಜಂಗಮಲಿಂಗವೆಂಬ ಭಾಷೆ ಪಲ್ಲಟವಾಯಿತ್ತು. ಇನ್ನು ಜಂಗಮವೆಂಬ ಶಿಕ್ಷಾಶಸ್ತ್ರದಲ್ಲಿ ಎನ್ನ ಹೊಯ್ದು ಬಯ್ದು ರಕ್ಷಿಸುವುದು ಕೂಡಲಸಂಗಮದೇವಾ