ನಂಬಿದ ಹೆಂಡತಿಗೆ ಗಂಡನೊಬ್ಬನೆ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ನಂಬಿದ ಹೆಂಡತಿಗೆ ಗಂಡನೊಬ್ಬನೆ ಕಾಣಿರೋ
ನಂಬಬಲ್ಲ ಭಕ್ತಂಗೆ ದೇವನೊಬ್ಬನೆ ಕಾಣಿರೋ. ಬೇಡ ಬೇಡ
ಅನ್ಯ ದೈವದ ಸಂಗ ಹೊಲ್ಲ ! ಬೇಡ ಬೇಡ
ಪರದೈವದ ಸಂಗ ಹೊಲ್ಲ ! ಬೇಡ ಬೇಡ
ಅನ್ಯ ದೈವವೆಂಬುದು ಹಾದರ ಕಾಣಿರೋ
ಕೂಡಲಸಂಗಮದೇವ ಕಂಡಡೆ ಮೂಗ ಕೊಯ್ವ ಕಾಣಿರೊ.