ನಚ್ಚಿದೆನೆಂದಡೆ ಮಚ್ಚಿದೆನೆಂದಡೆ, ಸಲೆ
ಗೋಚರ
ಲೇಖಕರು: ಬಸವಣ್ಣ
ಶೀರ್ಷಿಕೆ: vachana saahitya
ವರ್ಷ: 1191 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ನಚ್ಚಿದೆನೆಂದಡೆ ಮಚ್ಚಿದೆನೆಂದಡೆ
ಸಲೆ ಮಾರುವೋದೆನೆಂದಡೆ ತನುವನಲ್ಲಾಡಿಸಿ ನೋಡುವೆ ನೀನು. ಮನವನಲ್ಲಾಡಿಸಿ ನೋಡುವೆ ನೀನು. ಧನವನಲ್ಲಾಡಿಸಿ ನೋಡುವೆ ನೀನು. ಇವಕ್ಕಂಜದಿದ್ದಡೆ ಭಕ್ತಿಕಂಪಿತ [ನೀನು] ಕೂಡಲಸಂಗಮದೇವಾ. 214