ನಚ್ಚುಮಚ್ಚಿಂಗೆ ಪೂಜಿಸಿ ನಿಶ್ಚಯವೆಂದೆನಲಿಲ್ಲ. ತಾನು ಲಿಂಗವೊ ? ಪ್ರಾಣ ಲಿಂಗವೊ ? ಆವುದು ಲಿಂಗ ? ಬಲ್ಲವರು ನೀವು ಹೇಳಿರೆ ಅಂಗದಲ್ಲಿ ಅಂ(ಸಂ ?)ಗಿಯಲ್ಲ ಸಂಗದಲ್ಲಿ ವ್ಯಸನಿಯಲ್ಲ ಅಂಗವಿಲ್ಲದ ಸಂಗ ಗುಹೇಶ್ವರ ನಿಮ್ಮ ಶರಣ.