ನಚ್ಚು ಮಚ್ಚಿನ ಶರಣರೆನ್ನ
ಗೋಚರ
ಲೇಖಕರು: ಬಸವಣ್ಣ
ಶೀರ್ಷಿಕೆ: vachana saahitya
ವರ್ಷ: 1191 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ನಚ್ಚು ಮಚ್ಚಿನ ಶರಣರೆನ್ನ ಕಣ್ಣಮುಂದೆ ಬಂದು ನಿಂದಿರಲು ಎನ್ನ ತನುವ ಬಗಿದು ಎನ್ನ ತನುವಿನೊಳಗಿಂಬಿಟ್ಟುಕೊಂಬೆನು
ಎನ್ನ ಮನವ ಬಗಿದು ಎನ್ನ ಮನದೊಳಗಿಂಬಿಟ್ಟುಕೊಂಬೆನು
ಎನ್ನ ಕಂಗಳ ಬಗಿದು ಎನ್ನ ಕಂಗಳೊಳಗಿಂಬಿಟ್ಟುಕೊಂಬೆನು. ಕೂಡಲಸಂಗನ ಶರಣರೆನ್ನ ಒಡೆಯರಾಗಿ ಎನ್ನ ಭಾವಕ್ಕೆ ಬಂದ ಭಕ್ತಿಯ ಮಾಡುವೆನು.