ನಚ್ಚು ಮಚ್ಚಿನ ಸುಖ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ನಚ್ಚು ಮಚ್ಚಿನ ಸುಖ ಪರಿಣಾಮ ಸನ್ನಹಿತವಾದ ಬಳಿಕ
ಇನ್ನು ಅನುಭಾವವೆಂಬುದಿಲ್ಲ_ಅಂತಿರಲಿ ನುಡಿಯ ಗಡಣ. ಶಶಿಧರನಟ್ಟಿದ ಬೆಸನ ಮಾಡಬಂದ ಬಳಿಕ
ಹೇಳಿದ ಮಣಿಹವ ಮಾಡುತ್ತಿಹುದಲ್ಲದೆ ಅದು ತನ್ನಲ್ಲಿ ತಾನು ಬೆರಸುವಂದಿಗೆ ಬೆರಸಲಿ; ಆ ದಿನಕ್ಕೆ ಬಂದು ಹೇಳುವೆವು ನಿರ್ಣಯವ. ಗುಹೇಶ್ವರಲಿಂಗದ ಆಣತಿ ಬಪ್ಪನ್ನಬರ ಶಿವಶರಣರೆಲ್ಲರೂ ಸಂಗನಬಸವಣ್ಣ ಸಹಿತ ನಿತ್ಯರಾಗಿ ಇರಿ.