ವಿಷಯಕ್ಕೆ ಹೋಗು

ನಡೆದಡೆ ನಡೆಗೆಟ್ಟ ನಡೆಯ

ವಿಕಿಸೋರ್ಸ್ದಿಂದ


ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya


ನಡೆದಡೆ ನಡೆಗೆಟ್ಟ ನಡೆಯ ನಡೆವುದಯ್ಯಾ. ನುಡಿದಡೆ ನುಡಿಗೆಟ್ಟ ನುಡಿಯ ನುಡಿವುದಯ್ಯಾ. ಒಡಲ ಹಿಡಿದಡೆ ಹಿಡಿಯದೆ ಹಿಡಿವುದಯ್ಯಾ. ಕೂಡುವಡೆ ಕೇಡಿಲ್ಲದ ಕೂಟವ ಕೂಡುವುದಯ್ಯಾ
ಗುಹೇಶ್ವರಾ ನಿಮ್ಮಲ್ಲಿ ನಿಲುವುದಯ್ಯಾ.