ನಯನದಾಹಾರವ ಜಂಗಮವ ನೋಡಿಸುವೆನು,

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ನಯನದಾಹಾರವ ಜಂಗಮವ ನೋಡಿಸುವೆನು
ಶ್ರೋತ್ರದಾಹಾರವ ಜಂಗಮವ ಕೇಳಿಸುವೆನು
ಘ್ರಾಣದಾಹಾರವ ಜಂಗಮವ ವಾಸಿಸುವೆನು
ಜಿಹ್ವೆಯಾಹಾರವ ಜಂಗಮವನೂಡಿಸುವೆನು
ಕವಚದಾಹಾರವ ಜಂಗಮಕ್ಕೆ ಹೊದ್ದಿಸುವೆನು
ಅಧಿಕ ಪ್ರೇಮ ಪರಿಣಾ[ಮ]ವ ಮಾಡುವೆನು
ಸಕಲಪದಾರ್ಥಂಗಳ ನೀಡುವೆನು
ಕೂಡಲಸಂಗಾ ನಿಮ್ಮ ಶರಣರಿಗೆ. 430