ನರಜನ್ಮದಲ್ಲಿ ಹುಟ್ಟಿ ಲಿಂಗಮುಖವನರಿಯದೆ
ಗೋಚರ
ಲೇಖಕರು: Basavanna
ಶೀರ್ಷಿಕೆ: vachana saahitya
ವರ್ಷ: 1191 AD
ಪ್ರಕಾಶಕರು: anubhava mantapa
ಮೂಲ: vachana saahitya
ನರಜನ್ಮದಲ್ಲಿ ಹುಟ್ಟಿ ಲಿಂಗಮುಖವನರಿಯದೆ ಉದಮದ ಸೊಕ್ಕಿ ತಲೆಗೇರಿತ್ತೆ ಅಯ್ಯಾ `ಜೀವೋ ಜೀವೇನ ಭಕ್ಷ್ಯತೇ ಕರ್ಮಕರ್ಮದಲಿಪ್ಪೆಯಯ್ಯಾ. ಅಂದೊಮ್ಮೆ ದಕ್ಷನು ಹೋತನ ಕೊಂದಲ್ಲಿ ಘೋಳಿಡಲಿ ಘೋಳಿಡಲಿ ತಂದಿಕ್ಕಿತ್ತೆ ವೇದ ಶಾಸ್ತ್ರಂಗಳು ಮೂರುತಿಗೊಂಡಲ್ಲಿ ಚತುರ್ವೇದಿಗಳಿಗೊಮ್ಮೆ ಅಕ್ಕಿತ್ತೆ ಅಯ್ಯಾ ! ನಮ್ಮ ಕೂಡಲಸಂಗಮದೇವನನರಿಯದ ಕಾರಣ ನಾಯಕನರಕದಲ್ಲಿಕ್ಕಿತ್ತಯ್ಯಾ.