ವಿಷಯಕ್ಕೆ ಹೋಗು

ನರರು ಸುರರು ನವಕೋಟಿಯುಗಗಳ

ವಿಕಿಸೋರ್ಸ್ದಿಂದ


Title vachana saahitya
Author ChennaBasavanna
Year 1144-1168 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ನರರು ಸುರರು ನವಕೋಟಿಯುಗಗಳ ಪ್ರಳಯಕ್ಕೆ ಒಳಗಾಗಿ ಹೋದರು
ಒಳಗಾಗಿ ಹೋಹಲ್ಲಿ ಸುರಪತಿಗೆ ಪರಮಾಯು ನೋಡಿರೆ ! ಅಂಥ ಸುರಪತಿ ನವಕೋಟಿಯುಗ ಪ್ರಳಯಕ್ಕೆ ಒಳಗಾಗಿ ಹೋಹಲ್ಲಿ
ಚಿಟ್ಟಜನೆಂಬ ಋಷಿಗೆ ಒಂದು ಚಿಟ್ಟು ಸಡಿಲಿತ್ತು ನೋಡಿರೆ ! ಅಂಥ ಚಿಟ್ಟನೆಂಬ ಋಷಿ ನವಕೋಟಿಯುಗ ಪ್ರಳಯಕ್ಕೆ ಒಳಗಾಗಿ ಹೋಹಲ್ಲಿ ಚಿಪ್ಪಜನೆಂಬ ಋಷಿಗೆ ಒಂದು ಚಿಪ್ಪು ಸಡಿಲಿತ್ತು ನೋಡಿರೆ ! ಅಂಥ ಚಿಪ್ಪಜನೆಂಬ ಋಷಿ ನವಕೋಟಿಯುಗ ಪ್ರಳಯಕ್ಕೆ ಒಳಗಾಗಿ ಹೋಹಲ್ಲಿ ಡೊಂಕಜನೆಂಬ ಋಷಿಗೆ ಒಂದು ಡೊಂಕು ಸಡಿಲಿತ್ತು ನೋಡಿರೆ ! ಅಂಥ ಡೊಂಕಜನೆಂಬ ಋಷಿ ನವಕೋಟಿಯುಗ ಪ್ರಳಯಕ್ಕೆ ಒಳಗಾಗಿ ಹೋಹಲ್ಲಿ ರೋಮಜನೆಂಬ ಋಷಿಗೆ ಒಂದು ರೋಮ ಸಡಿಲಿತ್ತು ನೋಡಿರೆ ! ಅಂಥ ರೋಮಜನೆಂಬ ಋಷಿ ನವಕೋಟಿಯುಗ ಪ್ರಳಯಕ್ಕೆ ಒಳಗಾಗಿ ಹೋಹಲ್ಲಿ ಆದಿಬ್ರಹ್ಮಂಗೆ ಆಯುಷ್ಯವು ನೂರಾಯಿತ್ತು ನೋಡಿರೆ ! ಅಂಥ ಆದಿಬ್ರಹ್ಮ ನವಕೋಟಿಯುಗ ಪ್ರಳಯಕ್ಕೆ ಒಳಗಾಗಿ ಹೋಹಲ್ಲಿ ಆದಿನಾರಾಯಣಂಗೆ ಒಂದು ದಿನವಾಯಿತ್ತು ನೋಡಿರೆ ! ಅಂಥ ಆದಿ ನಾರಾಯಣ ನವಕೋಟಿಯುಗ ಪ್ರಳಯಕ್ಕೆ ಒಳಗಾಗಿ ಹೋಹಲ್ಲಿ ರುದ್ರಂಗೆ ಕಣ್ಣೆವೆ ಹಳಚಿತ್ತು ನೋಡಿರೆ ! ಅಂಥ ರುದ್ರರು ನವಕೋಟಿಯುಗ ಪ್ರಳಯಕ್ಕೆ ಒಳಗಾಗಿ ಹೋಹಲ್ಲಿ ಫಣಿಮುಖರೊಂದು ಕೋಟಿ
ಪಂಚಮುಖರೊಂದು ಕೋಟಿ
ಷಣ್ಮಮುಖರೊಂದು ಕೋಟಿ
ಸಪ್ತಮುಖರೊಂದು ಕೋಟಿ ಅಷ್ಟಮೂಖರೊಂದು ಕೋಟಿ
ನವಮುಖರೊಂದು ಕೋಟಿ ದಶಮುಖರೊಂದು ಕೋಟಿ_ ಇಂತಿವರೆಲ್ಲರ ಕೀರೀಟದಾಭರಣಂಗಳು ಬಿದ್ದವು ನೋಡಿರೆ ! ಅಂಥ ಸಪ್ತಕೋಟಿಗಳು ನವಕೋಟಿಯುಗ ಪ್ರಳಯಕ್ಕೆ ಒಳಗಾಗಿ ಹೋಹಲ್ಲಿ ನಂದಿವಾಹನರೊಂದು ಕೋಟಿ
ಭೃಂಗಿ ಪ್ರಿಯರೊಂದು ಕೋಟಿ ಚಂದ್ರಪ್ರಿಯರೊಂದು ಕೋಟಿ_ ಇಂತೀ ತ್ರಿಕೋಟಿಗಳ ತಲೆಗಳು ಬಾಗಿದವು ನೋಡಿರೆ ! ಅಂಥ ತ್ರಿಕೋಟಿಗಳ ತಲೆಗಳು ನವಕೋಟಿಯುಗ ಪ್ರಳಯಕ್ಕೆ ಒಳಗಾಗಿ ಹೋಹಲ್ಲಿ ಕೂಡಲಚೆನ್ನಸಂಗಯ್ಯಾ ನಮ್ಮ ಬಸವಣ್ಣನೀ ಸುದ್ದಿಯನೇನೆಂದುವರಿಯನು