ನರ ಕೂರಂಬಿನಲೆಚ್ಚ, ಅವಂಗೊಲಿದೆಯಯ್ಯಾ,
ಗೋಚರ
ಲೇಖಕರು: ಬಸವಣ್ಣ
ಶೀರ್ಷಿಕೆ: vachana saahitya
ವರ್ಷ: 1191 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ನರ ಕೂರಂಬಿನಲೆಚ್ಚ
ಅವಂಗೊಲಿದೆಯಯ್ಯಾ
ಅರಳಂಬಿನಲೆಚ್ಚ ಕಾಮನನುರುಹಿದೆ. ಇರುಳು ಹಗಲೆನ್ನದೆ ಪ್ರಾಣಘಾತಕವ ಮಾಡಿದ ಬೇಡನ ಕೈಲಾಸಕೊಯ್ದೆಯಯ್ಯಾ
ಎನ್ನನೇತಕೊಲ್ಲೆ ಕೂಡಲಸಂಗಮದೇವಾ 65