Library-logo-blue-outline.png
View-refresh.svg
Transclusion_Status_Detection_Tool

ನವನಾಳ ಬಿಂದು ಪವನ

ವಿಕಿಸೋರ್ಸ್ ಇಂದ
Jump to navigation Jump to searchPages   (key to Page Status)   


ನವನಾಳ ಬಿಂದು ಪವನ ಹೃದಯಕಮಲ ಮಧ್ಯದ ದಳವ ಮೆಟ್ಟಿ
ಗಳಿಗೆ ಗಳಿಗೆಗೆ ಚರಿಸುವ ಪರಮಹಂಸನ ಆರಿಗೆಯೂ ಅರಿಯಬಾರದು_ಘಮ್ಮುಘಮ್ಮೆನೆ ಸುತ್ತುವನಲ್ಲದೆ ! ಅದೆಂತೆಂದಡೆ: ``ಪೂರ್ವದಲೇ ಭವೇತ್ ಭಕ್ತಿರಾಗ್ನೇಯಾಂ ಚ ಕ್ಷುಧೈವ ಚ ದಕ್ಷಿಣೇ ಕ್ರೋಧಮುತ್ಪನ್ನಂ ನೈರುತ್ಯಾಂ ಸತ್ಯಮೇವ ಚ ಪಶ್ಚಿಮೇ ತು ಭವೇತ್ ನಿದ್ರಾ ವಾಯವ್ಯಾಂ ಗಮನಸ್ತಥಾ ಉತ್ತರಾಯಾಂ ಧರ್ಮಶೀಲಾವೈಶಾನ್ಯಾಂ ವಿಷಯಸ್ತಥಾ ಅಷ್ಟದಲೇಷು ಮಧ್ಯಸ್ಥಮಾನಚಂದಮಚಲಂ ಶಿವಃ_ಎಂದುದಾಗಿ ಇಂದು ಅಷ್ಟದಳವ ಮೆಟ್ಟಿ ಚರಿಸುವ ಆ ಪರಮಹಂಸನ ತಲೆಗಿಂಬ ಮಾಡಿ ನಿಲಿಸಬಲ್ಲ ನಿಮ್ಮ ಶರಣ ಚನ್ನಬಸವಣ್ಣಂಗೆ ನಾನು ನಮೋ ನಮೋ ಎಂಬೆನು ಗುಹೇಶ್ವರಾ.