ನಾದದ ಉತ್ಪತ್ತಿ ಸ್ಥಿತಿ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ನಾದದ ಉತ್ಪತ್ತಿ ಸ್ಥಿತಿ ಲಯವನು ಹೇಳಿದಡೇನು ಕೇಳಿದಡೇನು
ಎಲೆ ಮರುಳೆ ! ಬಿಂದು ದಳದ ಉತ್ಪತ್ತಿ ಸ್ಥಿತಿ ಲಯವನು ಹೇಳಿದಡೇನು ಕೇಳಿದಡೇನು ಎಲೆ ಮರುಳೆ ! ಮಧ್ಯದಳದ ಉತ್ಪತ್ತಿ ಸ್ಥಿತಿ ಲಯವನು ಹೇಳಿದಡೇನು ಕೇಳಿದಡೇನು ಎಲೆ ಮರುಳೆ ! ಮುಗಿಲಗಲದ ಅಂಬರ ವಾಯು ಅಗ್ನಿಜಲ ಧರೆಯ ಹೊತ್ತುಕೊಂಡು ಅವ
ಹೇಳಿದಡೇನು ಕೇಳಿದಡೇನು ಎಲೆ ಮರುಳೆ ! ಗುಹೇಶ್ವರಲಿಂಗದ ಬಾರಿಗೊಳಗಾಗಿ
ಇವೆಲ್ಲವನುಂಟುಮಾಡಲರಿಯೆನಾಗಿ_ಎನಗಿಲ್ಲವೆನುತಿರ್ದೆನಯ್ಯಾ.