ನಾನಾರಿದೆಲ್ಲಿಯ ಪಾಶವಿದೆತ್ತಣ ಮರವೆ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ನಾನಾರಿದೆಲ್ಲಿಯ ಪಾಶವಿದೆತ್ತಣ ಮರವೆ ಅಕಟಕಟಾ ತಾಮಸಕ್ಕೆ ಗುರಿಮಾಡಿದೆಯಲ್ಲಾ. ಎಲೆ ಕರುಣಾಂಬುನಿಧಿಯೆ
ದಯಾಪಾರಿಯೆ
ನೀನು ವಿಚಾರಿಸದಿರ್ದಡಾನೆಂತುಳಿವೆನಯ್ಯಾ. ನಿಮ್ಮ ಕೃಪಾದೃಷ್ಟಿಯಿಂ ನಿರೀಕ್ಷಿಸಿ ನಿಮ್ಮತ್ತ ಸಾರುವಂತೆ ಮಾಡಾ ಕೂಡಲಸಂಗಮದೇವಾ.