ವಿಷಯಕ್ಕೆ ಹೋಗು

ನಾನಾ ಸ್ಥಾನದಲ್ಲಿ ಬಂದು

ವಿಕಿಸೋರ್ಸ್ದಿಂದ


ಲೇಖಕರು: ಬಸವಣ್ಣ
ಶೀರ್ಷಿಕೆ: vachana saahitya
ವರ್ಷ: 1191 AD
ಪ್ರಕಾಶಕರು: anubhava mantapa
ಮೂಲ: vachana saahitya

ನಾನಾ ಸ್ಥಾನದಲ್ಲಿ ಬಂದು ತೊಳಲಿ ಬಳಲಿ ಅಳಿದುಳಿದು ನಿಂದ ನಿಲದವನಲ್ಲ
ಮತ್ರ್ಯಲೋಕದಲ್ಲಿ ಶಿವಾಚಾರದ ಘನವುಹೂಳಿಹೋಯಿತ್ತೆಂದು ಕರ್ತನು ತಾನೆ ಮಹಾಪ್ರಸಾದಿಯಾಗಿ ಉದಯವಾದನು. ಹಸ್ತಮಸ್ತಕ ಸಂಯೋಗವಿಲ್ಲದ ಮುನ್ನವೆ ಆದಿಗುರು ಅನಾದಿಶಿಷ್ಯನೆಂಬುದ ನೆಲೆಮಾಡಿ
ಸಂಗಮನಾಥನೆಂಬ ಲಿಂಗವನೆನ್ನ ಕೈಯಲ್ಲಿ ಕೊಟ್ಟು
ಸಾಮದಿಂದ ಅನುಗ್ರಹಿಸಿಕೊಂಡನು. ಎನ್ನ ಹಿಂದಣ ಪೂರ್ವಾಪರವನೆತ್ತಿ ತೋರಿ ತನ್ನತ್ತ ತೆಗೆದುಕೊಂಡನು ಕೂಡಲಸಂಗಮದೇವರಲ್ಲಿ ಜೆನ್ನಬಸವಣ್ಣನು.