ನಾನು ಆರಂಭವ ಮಾಡುವೆನಯ್ಯಾ,

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ನಾನು ಆರಂಭವ ಮಾಡುವೆನಯ್ಯಾ
ಗುರುಪೂಜೆಗೆಂದು
ನಾನು ಬೆವಹಾರವ ಮಾಡುವೆನಯ್ಯಾ
ಲಿಂಗಾರ್ಚನೆಗೆಂದು
ನಾನು ಪರಸೇವೆಯ ಮಾಡುವೆನಯ್ಯಾ
ಜಂಗಮದಾಸೋಹಕ್ಕೆಂದು. ನಾನಾವಾವ ಕರ್ಮಂಗಳ ಮಾಡಿದಡೆಯು ಆ ಕರ್ಮಫಲಭೋಗವ ನೀ ಕೊಡುವೆ ಎಂಬುದ ನಾನು ಬಲ್ಲೆನು. ನೀ ಕೊಟ್ಟ ದ್ರವ್ಯವ ನಿಮಗಲ್ಲದೆ ಮತ್ತೊಂದಕ್ಕೆ ಮಾಡೆನು
ನಿಮ್ಮ ಸೊಮ್ಮಿಂಗೆ ಸಲಿಸುವೆನು. ನಿಮ್ಮಾಣೆ ಕೂಡಲಸಂಗಮದೇವಾ.