ನಾನು ನಿನಗೊಲಿದೆ, ನೀನು

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ನಾನು ನಿನಗೊಲಿದೆ
ನೀನು ಎನಗೊಲಿದೆ. ನೀನೆನ್ನನಗಲದಿಪ್ಪೆ
ನಾನಿನ್ನನಗಲದಿಪ್ಪೆನಯ್ಯಾ. ನಿನಗೆ ಎನಗೆ ಬೇರೊಂದು ಠಾವುಂಟೆ ? ನೀನು ಕರುಣಿಯೆಂಬುದ ಬಲ್ಲೆನು ; ನೀನಿರಿಸಿದ ಗತಿಯೊಳಗಿಪ್ಪವಳಾನು. ನೀನೆ ಬಲ್ಲೆ ಚೆನ್ನಮಲ್ಲಿಕಾರ್ಜುನಾ.