ನಾನೆಂಬುದು ಪ್ರಮಾಣ ನೀನೆಂಬುದು ಪ್ರಮಾಣ. ಸ್ವಯವೆಂಬುದು ಪ್ರಮಾಣ ಪರವೆಂಬುದು ಪ್ರಮಾಣ. ಪ್ರಮಾಣವೆಂಬುದು ಪ್ರಮಾಣ ಗುಹೇಶ್ವರನೆಂಬುದು ಅಪ್ರಮಾಣ !