ನಾನೆಂಬುದೆಲ್ಲಿಯದಯ್ಯ ಲಿಂಗವೆಂಬ ಮಹಾತ್ಮಂಗೆ ಶರಣನೊಡಲುಗೊಂಡಡೇನು ಸಾಮಾನ್ಯನೆ ಪ್ರಕೃತಿಗುಣವಿಡಿದು ಭಿನ್ನಭಾವಿಯಲ್ಲ. ಕೂಡಲಸಂಗನ ಶರಣರ ಪರಿ ಬೇರೆ.