ನಾನೆಂಬ ಅಹಂಕಾರ ತಲೆದೋರಿದಲ್ಲಿ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ನಾನೆಂಬ ಅಹಂಕಾರ ತಲೆದೋರಿದಲ್ಲಿ ಅಟಮಟ ಕುಟಿಲ ಕುಹಕವೆಂಬ ಬಿರುಗಾಳಿ ಹುಟ್ಟಿತ್ತು. ಆ ಬಿರುಗಾಳಿ ಹುಟ್ಟಲೊಡನೆ ಜ್ಞಾನಜ್ಯೋತಿ ಕೆಟ್ಟಿತ್ತು. ಜ್ಞಾನಜ್ಯೋತಿ ಕೆಡಲೊಡನೆ
ನಾ ಬಲ್ಲೆ
_ಬಲ್ಲಿದರೆಂಬ ಅರುಹಿರಿಯರೆಲ್ಲರು ತಾಮಸಕ್ಕೊಳಗಾಗಿ ಸೀಮೆದಪ್ಪಿ ಕೆಟ್ಟರು ಕಾಣಾ ಗುಹೇಶ್ವರಾ.