ನಾನೊಂದು ಕಾರಣ ಮತ್ರ್ಯಕ್ಕೆ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ನಾನೊಂದು ಕಾರಣ ಮತ್ರ್ಯಕ್ಕೆ ಬಂದೆನು
ಬಂದ ಬಳಲಿಕೆಯ ಪರಿಹರಿಸಲಿಕ್ಕೆ ಚೆನ್ನಬಸವಣ್ಣ ಬಂದನು
ಇನ್ನು ಬಾರದಂತೆ ಪ್ರಭುದೇವರು ಬಂದರು
ಇದಕ್ಕೆ ಆಜ್ಞಾಕರ್ತೃ ಮಡಿವಾಳ ಮಾಚಿತಂದೆ ಬಂದನು. ನಾನಿನ್ನಾರಿಗಂಜೆನು
ಬದುಕಿದೆನು ಕಾಣಾ ಕೂಡಲಸಂಗಮದೇವಾ.