ನಾಭಿಮಂಡಲದೊಳಗೆ ಈರೈದು ಪದ್ಮದಳ,

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ನಾಭಿಮಂಡಲದೊಳಗೆ ಈರೈದು ಪದ್ಮದಳ
ಸದಮದ ಗಜಮಸ್ತಕದೊಳಗೆ ತೋರುತ್ತದೆ. ಅಕಾರ ಉಕಾರ ಮಕಾರ ಮರ್ಮಸ್ಥಾನ ತ್ರಿಕೂಟಸ್ಥಾನದ ಸಮರಸದ ಸುಖದಲ್ಲಿ ಬೆಳೆದ ಕಂದ ಮೂಲಾದಿಗಳ
ಹೊಸರಸದ ಅಮೃತವನು ಓಸರಿಸಿ
ದಣಿಯುಂಡ ತೃಪ್ತಿಯಿಂದ ಸುಖಿಯಾದೆನು ಗುಹೇಶ್ವರಾ.