ನಾ ದೇವನಲ್ಲದೆ ನೀ
ಗೋಚರ
ಲೇಖಕರು: ಅಲ್ಲಮ ಪ್ರಭು
ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ನಾ ದೇವನಲ್ಲದೆ ನೀ ದೇವನೆ ? ನೀ ದೇವನಾದಡೆ ಎನ್ನನೇಕೆ ಸಲಹೆ ? ಆರೈದು
ಒಂದು ಕುಡಿತೆ ಉದಕವನೆರೆವೆ
ಹಸಿದಾಗ ಒಂದು ತುತ್ತು ಓಗರವನಿಕ್ಕುವೆ._ ನಾ ದೇವ ಕಾಣಾ ಗುಹೇಶ್ವರಾ !