ನಾ ಹುಟ್ಟಿದಲ್ಲಿ ಸಂಸಾರ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ನಾ ಹುಟ್ಟಿದಲ್ಲಿ ಸಂಸಾರ ಹುಟ್ಟಿತ್ತು. ಸಂಸಾರ ಹುಟ್ಟಿದಲ್ಲಿ ಅಜ್ಞಾನ ಹುಟ್ಟಿತ್ತು. ಅಜ್ಞಾನ ಹುಟ್ಟಿದಲ್ಲಿ ಆಶೆ ಹುಟ್ಟಿತ್ತು. ಆಶೆ ಹುಟ್ಟಿದಲ್ಲಿ ಕೋಪ ಹುಟ್ಟಿತ್ತು. ಆ ಕೋಪಾಗ್ನಿಯ ತಾಮಸಧೂಮ್ರ ಮುಸುಕಿದಲ್ಲಿ ನಾ ನಿಮ್ಮ ಮರೆದು ಭವದುಃಖಕ್ಕೀಡಾದೆ. ನೀ ಕರುಣದಿಂದೆತ್ತಿ ಎನ್ನ ಮರಹ ವಿಂಗಡಿಸಿ ನಿಮ್ಮ ಪಾದವನರುಹಿಸಯ್ಯಾ
ಚೆನ್ನಮಲ್ಲಿಕಾರ್ಜುನಾ.