ನಿಂದೆ, ಎಂಬುದು ಬಂದ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ನಿಂದೆ
ಎಂಬುದು ಬಂದ ಭವದಲ್ಲಿಯೆ ಹೋಯಿತ್ತು. ಮುಂದೆ ಗುರುಕಾರುಣ್ಯವಾದಲ್ಲಿಯೇ `ಹಿಂದು' ಹರಿಯಿತ್ತು. ಮರ್ತ್ಯಲೋಕದ ಮಹಾಗಣಂಗಳು ಮೆಚ್ಚೆ
ದಾಸೋಹವ ಮಾಡಿದಲ್ಲಿಯೆ ಪ್ರಮಥಗಣಂಗಳು ತಮ್ಮೊಳಗೆ ನಿಮ್ಮನು ಇಂಬಿಟ್ಟುಕೊಂಡು. ಅಂಗದ ಮೇಲೆ ಲಿಂಗವುಳ್ಳುದೆಲ್ಲವೂ ಸಂಗಮನಾಥನೆಂದರಿದು
ನಿನ್ನ ಸರ್ವಾಂಗದಲ್ಲಿ ಲಿಂಗಸನ್ನಹಿತವಾದಲ್ಲಿಯೆ ಪ್ರಾಣಲಿಂಗಸಂಬಂಧವಳವಟ್ಟಿತ್ತು. ಲಕ್ಷದ ಮೇಲೆ ತೊಂಬತ್ತಾರುಸಾವಿರ ಪ್ರಮಥರಿಗೆ ಮಾಡಿದ ಸಯದಾನವ ನಿಮ್ಮ ಲಿಂಗಕ್ಕೆ ಆರೋಗಿಸಲಿತ್ತು ತೃಪ್ತಿಪಡಿಸಿದಲ್ಲಿಯೆ ನಿನ್ನ ತನು ಮನ ಪ್ರಾಣಗಳು ಅರ್ಪಿತವಾದಲ್ಲಿ ಮಹಾಪ್ರಸಾದ ಸಾಧ್ಯವಾಯಿತ್ತು. ಆದಿಯ ಲಿಂಗವಿಡಿದು ನಾನು ನಿಮ್ಮಲ್ಲಿ ಅಡಗಿದ ಬಳಿಕ ಹಿಂದಣ ಸಂಕಲ್ಪವಳಿಯಿತ್ತು. ಸರ್ವಾಚಾರಸಂಪತ್ತು ನಿನ್ನಲ್ಲಿ ಸಯವಾದಲ್ಲಿ ಸರ್ವಸೂತಕ ತೊಡೆಯಿತ್ತು. ಗುಹೇಶ್ವರಲಿಂಗವು ನಿನ್ನ ಹೃದಯಕಮಲದಲ್ಲಿ ನೆಲೆಗೊಂಡು ನಿನ್ನ ಕರಸ್ಥಲದೊಳಗೆ ತೊಳಗೆ ಬೆಳಗುತ್ತೈದಾನೆ. ಇನ್ನೊಮ್ಮೆ ತಿಳಿದು ನೋಡಾ ಸಂಗನಬಸವಣ್ಣಾ.