ನಿಃಕಲ ಶಿವತತ್ವದಲ್ಲಿ ಜ್ಞಾನಚಿತ್ತು
ಗೋಚರ
ಲೇಖಕರು: ತೊಂಟದ ಸಿದ್ಧಲಿಂಗೇಶ್ವರ ಶಿವಯೋಗಿಗಳು
ಶೀರ್ಷಿಕೆ: vachana saahitya
ವರ್ಷ: 1550-1600 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ನಿಃಕಲ ಶಿವತತ್ವದಲ್ಲಿ ಜ್ಞಾನಚಿತ್ತು ಉದಯವಾಯಿತ್ತು. ಆ ಚಿತ್ತಿನಿಂದ ಆಕಾರ ಉಕಾರ ಮಕಾರಗಳೆಂಬ ಅಕ್ಷರತ್ರಯಂಗಳಾದವು. ಅಕಾರವೇ ನಾದ
ಉಕಾರವೇ ಬಿಂದು
ಮಕಾರವೇ ಕಳೆ. ಇಂತೀ ತ್ರಿವಿಧಕಕ್ಕೆ ತಾಯಿ ಚಿತ್ತು. ಇಂತೀ ನಾಲ್ಕು ಒಂದಾದಲ್ಲಿ ಓಂಕಾರವೆಂಬ ಪ್ರಣವದುತ್ಪತ್ತಿಯಾಯಿತ್ತು. ಆ ಓಂಕಾರವೆಂಬ ಪ್ರಣವವೇ
ಅಖಂಡ ಪರಿಪೂರ್ಣ ಗೋಳಕಾಕಾರ ತೇಜೋಮೂರ್ತಿಯಪ್ಪ ಮಹಾಲಿಂಗನೋಡಾ
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.