ವಿಷಯಕ್ಕೆ ಹೋಗು

ನಿಜವರಿಯದ (ನಿಜವರಿದ?) ಶರಣಂಗೆ

ವಿಕಿಸೋರ್ಸ್ದಿಂದ


ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya


ನಿಜವರಿಯದ (ನಿಜವರಿದ?) ಶರಣಂಗೆ ಆಚಾರವಿಲ್ಲ
ಆಚಾರವಿಲ್ಲದವಂಗೆ ಲಿಂಗವಿಲ್ಲ. ಲಿಂಗವಿಲ್ಲದ ಶರಣನ ಸುಳುಹು ಜಗದಲ್ಲಿ ಸುಳಿವು
ಹೊರವೇಷದ ಜಂಗಮಕ್ಕೆ ವಿಪರೀತ ಚರಿತ್ರವದು ಸರ್ವರಿಗೆ ಪ್ರಕಟವಲ್ಲ ನೋಡಾ ! ಸಂಸಾರಿಗಳು ಬಳಸುವ ಬಳಕೆಯನೆಂದೂ ಹೊದ್ದನು. ಇದನರಿಯದೆ ಸಟೆಯ ಹಿಡಿದು ದಿಟವಮರದು ಇಲ್ಲದ ಲಿಂಗವನುಂಟೆಂದು ಪೂಜಿಸುವರಾಗಿ ಆಚಾರವುಂಟು
ಆಚಾರವುಳ್ಳವಂಗೆ ಗುರುವುಂಟು
ಗುರುವುಳ್ಳವಂಗೆ ಲಿಂಗವುಂಟು
ಲಿಂಗಪೂಜಕರಿಗೆ ಭೋಗವುಂಟು. ಈ ಬರಿವಾಯ ಮಂಜಕ(ವಂಚಕ ?)ರೆಲ್ಲರೂ ಪೂಜಕರಾದರು. ಗುಹೇಶ್ವರಲಿಂಗವು ಅಲ್ಲಿ ಇಲ್ಲವೆಂಬುದನು ಈ ವೇಷಲಾಂಛನರೆತ್ತ ಬಲ್ಲರು ಹೇಳಯ್ಯ ಸಂಗನಬಸವಣ್ಣಾ.