ನಿತ್ಯತೃಪ್ತಂಗೆ ನೈವೇದ್ಯದ ಹಂಗೇತಕ್ಕೆ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ನಿತ್ಯತೃಪ್ತಂಗೆ ನೈವೇದ್ಯದ ಹಂಗೇತಕ್ಕೆ ? ಸುರಾಳ ನಿರಾಳಂಗೆ ಮಜ್ಜನದ ಹಂಗೇತಕ್ಕೆ ? ಸ್ವಯಂಜ್ಯೋತಿರ್ಮಯಂಗೆ ದೀಪಾರಾಧನೆಯ ಹಂಗೇತಕ್ಕೆ ? ಸುವಾಸನೆ ಸೂಕ್ಷ್ಮಗಂಧ ಕರ್ಪೂರಗೌರಂಗೆ ಪುಷ್ಪದ ಹಂಗೇತಕ್ಕೆ ? ಮಾಟದಲಿ ಮನ ನಂಬುಗೆಯಿಲ್ಲದ
ಅಹಂಕಾರಕ್ಕೀಡಾದ
ಭಕ್ತಿಯೆಂಬ ಪಸಾರವನಿಕ್ಕಿ ಹೊಲೆಹದಿನೆಂಟುಜನ್ಮವ ಹೊರೆವುದರಿಂದ ಅಂಗೈಯಲೊರಸಿ ಮುಕ್ತಿಯ ಮೂಲ ಶಿಖಿರಂಧ್ರದ ಕಾಮನ ಸುಟ್ಟು ಶುದ್ಧಸ್ಫಟಿಕ ಸ್ವಯಂಜ್ಯೋತಿಯನು ಸುನಾಳದಿಂದ ಹಂ ಕ್ಷಂ ಎಂಬೆರಡಕ್ಷರವ ಸ್ವಯಾನುಭಾವಭಕ್ತಿ ನಿರ್ವಾಣವಾದವರನೆನಗೊಮ್ಮೆ ತೋರಿದೆ. ಶ್ರೀಗಿರಿ ಚೆನ್ನಮಲ್ಲಿಕಾರ್ಜುನಾ.