ನಿತ್ಯನೆಂಬ ಭಕ್ತನ ಮನೆಗೆ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ನಿತ್ಯನೆಂಬ ಭಕ್ತನ ಮನೆಗೆ ಘನಚೈತನ್ಯವೆಂಬ ಜಂಗಮ ಬಂದಡೆ
ಜಲವಿಲ್ಲದ
ಜಲದಲ್ಲಿ ಪಾದಾರ್ಚನೆಯ ಮಾಡಿದಡೆ
ಮಾಡಿದ ಆ ಪಾದೋದಕವೆ ಮಹಾಪದವಯ್ಯಾ
ಸ್ವಚ್ಛಾನಂದಜಲೇ ನಿತ್ಯಂ ಪ್ರಕ್ಷಾಲ್ಯ ಚರಪಾದುಕಾಂ ತಚ್ಚ ಪಾದೋದಕಂ ಪೀತ್ವಾ ಸ ಮುಕ್ತೋ ನಾತ್ರ ಸಂಶಯಃ ಎಂದುದಾಗಿ
ಆ ಪಾದೋದಕದಲ್ಲಿ ಪರಮಪರಿಣಾಮಿ ಕೂಡಲಚೆನ್ನಸಂಗಾ ನಿಮ್ಮ ಶರಣ.