ನಿನ್ನರಿಕೆಯ ನರಕವೆ ಮೋಕ್ಷ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ನಿನ್ನರಿಕೆಯ ನರಕವೆ ಮೋಕ್ಷ ನೋಡಯ್ಯಾ
ನಿನ್ನನರಿಯದ ಮುಕ್ತಿಯೆ ನರಕ ಕಂಡಯ್ಯಾ. ನೀನೊಲ್ಲದ ಸುಖವೆ ದಃಖ ಕಂಡಯ್ಯಾ
ನೀನೊಲಿದ ದುಃಖವೆ ಪರಮಸುಖ ಕಂಡಯ್ಯಾ. ಚೆನ್ನಮಲ್ಲಿಕಾರ್ಜುನಯ್ಯಾ
ನೀ ಕಟ್ಟಿ ಕೆಡಹಿದ ಬಂಧನವ ನಿರ್ಬಂಧವೆಂದಿಪ್ಪೆನು.