ನಿಮ್ಮ ಭಕ್ತಿಯಲ್ಲಿ ಧರಧುರನೆಂಬೆ. ದಿಟಕ್ಕೆ ಬಂದಡೆ ಅಡ್ಡ ಮುಖವನಿಕ್ಕುವೆ- ಗರುಡಂಗೆ ಘಟಸರ್ಪನ ತೋರುವಂತೆ ! ಶಿವಶರಣೆಂದಡೆ ಕಿವಿ ಕೇಳದಂತಿಹೆನು ಮನಕ್ಕೆ ಮನವೇ ಸಾಕ್ಷಿಯಯ್ಯಾ ಕೂಡಲಸಂಗಮದೇವಾ. 312