ನಿಮ್ಮ ಶಕ್ತಿ ಜಗದೊಳಗಿಪ್ಪುದು,

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ನಿಮ್ಮ ಶಕ್ತಿ ಜಗದೊಳಗಿಪ್ಪುದು
ಜಗದ ಶಕ್ತಿ ನಿಮ್ಮೊಳಗಿಪ್ಪುದು. ಜಗಕ್ಕೆ ನಿಮಗೆ ಭೇದವಾದುದಕ್ಕೆ ಬೆರಗಾದೆನು ! ಅಂದೊಮ್ಮೆ ತ್ರಿಪುರವ ಸುಟ್ಟಲ್ಲಿ ನಾಚಿತ್ತೆನ್ನ ಮನವು. ಕಾಮನನುರುಹಿ ಕಾಮಹರನೆನಿಸಿಕೊಂಡಡೆ ನಿನ್ನ ಅಹಂಕಾರವ ನೋಡಿ ಹೇಸಿತ್ತೆನ್ನ ಮನವು. ಕಾಲನ ಸುಟ್ಟು ಬೊಟ್ಟನಿಟ್ಟಡೆ ನಗೆಗೆಡೆಯಾಯಿತ್ತು ನಿಮ್ಮ ಘನವೆನಗೆ. ಗುಹೇಶ್ವರಾ
ನೀ ಮುನಿದು ನೊಸಲಕಣ್ಣ ತೆಗೆದಡೆ ಎನ್ನ ಅಂಗಾಲೊಳಡಗಿತ್ತಯ್ಯಾ ನಿಮ್ಮ ಕೋಪ.