ನಿರಾಳವೆಂಬ ಶಿಶುವಿಂಗೆ ಪೃಥ್ವಿಯೆಂಬ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ನಿರಾಳವೆಂಬ ಶಿಶುವಿಂಗೆ ಪೃಥ್ವಿಯೆಂಬ ತೊಟ್ಟಿಲು
ನಿಜೈಕ್ಯವೆಂಬ ತಾಯಿ ಬಂದು ಮೊಲೆಯ ಕೊಟ್ಟು ಬೆಣ್ಣೆಯನಿಕ್ಕಿ; ವಾಯು ಬಂದು ತೊಟ್ಟಿಲ ತೂಗಿ ಜೋಗುಳವಾಡಿದಡೆ
ಆಕಾಶ ಬಂದು ಶಿಶುವನೆತ್ತಿಕೊಂಡು ಬೆಳೆಯಿಸಿತ್ತಲ್ಲಾ ! ನಿರಾಳವೆಂಬ ಹಸಿವು-ತೃಷೆಯ ಶಿಶುವಿಂಗೆ ಬೇಕೆಂದು ಮುಗ್ಧೆಯ ಬೆಸಗೊಳಲರಿಯರು ಮೂರುಲೋಕವು ಗುಹೇಶ್ವರಾ.