ನಿರಾಳ ನಿಶ್ಶೂನ್ಯ ಪರಮಜಂಗಮದರಿವು
ಗೋಚರ
ಲೇಖಕರು: ಅಲ್ಲಮ ಪ್ರಭು
ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ನಿರಾಳ ನಿಶ್ಶೂನ್ಯ ಪರಮಜಂಗಮದರಿವು ತಾನಾಗದೆ
ಬರಿದೆ ಅಹಂಕಾರದಿಂದ ಮೂರು ಮಲಂಗಳ ಸ್ವೀಕರಿಸುತ್ತ ನಾವೆ ಜಂಗಮವೆಂದು ನುಡಿವ ಕರ್ಮ ಪಾಷಂಡಿಗಳು_ ಕಾಶಿ ಕೇದಾರ ಶ್ರೀಶೈಲ ವಿರೂಪಾಕ್ಷನೆಂದು
ಮತ್ತೆ ಈರಣ್ಣ ಮಲ್ಲಣ್ಣ ಬಸವಣ್ಣ ಇವರೇ ದೇವರೆಂದು ಆ ಕಲ್ಲುಗಳ ತಮ್ಮ ಮನೆಯೊಳಗೊಂದು ಮೂಲೆ ಸಂದಿ ಗೊಂದಿ ಗೊತ್ತಿನೊಳಗಿಟ್ಟು ಅದರ ಬಳಿದ [ತೊಳೆದ] ನೀರು
ಅವರೆಂಜಲ ತಿಂಬುವ ಪಶುಗಳಿಗೆ ದೇವಭಕ್ತರೆನಬಹುದೇನಯ್ಯಾ ? ಎನಲಾಗದು. ಇಂತಪ್ಪ ಅನಾಚಾರಿ ಅಪಸ್ಮಾರಿ ಶ್ವಪಚರ ಜಂಗಮವೆಂದು ಪೂಜಿಸಲಾಗದು ಕಾಣಿರೊ. ವೀರಶೈವ ಆಚಾರವುಳ್ಳ ಭಕ್ತನು ಇದ ಮೀರಿ ಪೂಜಿಸಿದಡೆ ಅವರಿಬ್ಬರಿಗೆಯೂ ಭವಕರ್ಮಂಗಳು ತಪ್ಪವು ಕಾಣಾ ಗುಹೇಶ್ವರಾ