ನಿರ್ವಿಕಾರಿಯ ಭಾವದಲ್ಲಿ ತೋರಿದ ಗರ್ವ ಬಿಳಿಯ ಮದಗಜವ ಕಳೆವರೆ ಅರಳವಲ್ಲ ನೋಡಾ. ಬಿಳಿಯ ಮದಗಜದ ಶಿರವ ಉರಿಯ ಚರಣದಲ್ಲಿ ಮೆಟ್ಟಿ ನಿರವನಯನನೆರೆದು ನಿಜಲಿಂಗೈಕ್ಯನಾದೆನು ಕಾಣಾ ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.