ನಿಶ್ಚಲವೆಂಬ ಭಾಜನದಲ್ಲಿ ನಿಜಜ್ಞಾನವೆಂಬ
ಗೋಚರ
ಲೇಖಕರು: Allama Prabhu
ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya
ನಿಶ್ಚಲವೆಂಬ ಭಾಜನದಲ್ಲಿ ನಿಜಜ್ಞಾನವೆಂಬ ಅಕ್ಕಿಯ ತುಂಬಿ
ಪರಮಾನಂದವೆಂಬ ಜಲವನೆರೆದು
ಸ್ವಯಂ ಪ್ರಕಾಶವೆಂಬ ಅಗ್ನಿಯಿಂದ ಪಾಕವಾದ ಲಿಂಗದೋಗರವು ಮಹಾಘನದಲ್ಲಿ ನಿಂದು ಘನತೃಪ್ತಿಯನೀವುತ್ತಿದ್ದಿತ್ತು ಕಾಣಿರೆ ! ಅದ ಕಣ್ಣಿಲ್ಲದೆ ಕಂಡು ಕೈಯಿಲ್ಲದ ಕೊಂಡು ಬಾಯಿಲ್ಲದೆ ಉಂಡ ತೃಪ್ತಿಯ
ಅರಿವಿಲ್ಲದ ಅರಿವಿನಿಂದ ಅರಿದು
ಸುಖಿಯಾದೆ ನಾನು ಗುಹೇಶ್ವರಾ.