Library-logo-blue-outline.png
View-refresh.svg
Transclusion_Status_Detection_Tool

ನಿಷ್ಠೆಯುಳ್ಳಾತಂಗೆ ನಿತ್ಯನೇಮದ ಹಂಗೇಕೆ

ವಿಕಿಸೋರ್ಸ್ ಇಂದ
Jump to navigation Jump to searchPages   (key to Page Status)   


ನಿಷ್ಠೆಯುಳ್ಳಾತಂಗೆ ನಿತ್ಯನೇಮದ ಹಂಗೇಕೆ ? ಸತ್ಯವುಳ್ಳಾತಂಗೆ ತತ್ವವಿಚಾರದ ಹಂಗೇಕೆ ? ಅರಿವುಳ್ಳಾತಂಗೆ ಅಗ್ಘವಣಿಯ ಹಂಗೇಕೆ ? ಮನಶುದ್ಧವುಳ್ಳವಂಗೆ ಮಂತ್ರದ ಹಂಗೇಕೆ ? ಭಾವ ಶುದ್ಧವುಳ್ಳವಂಗೆ ಹೂವಿನ ಹಂಗೇಕೆ ? ಕೂಡಲಚೆನ್ನಸಂಗಯ್ಯಾ
ನಿಮ್ಮನರಿದಾತಂಗೆ ನಿಮ್ಮ ಹಂಗೇಕೆ ?