ನೀನಿಕ್ಕಿದ ಸರಿದೊಡಕನಾರು ಬಿಡಿಸಬಲ್ಲರಯ್ಯಾ ? ನೀನಿಕ್ಕಿದ ಕಟ್ಟನಾರು ಕಳೆಯಬಲ್ಲರಯ್ಯಾ ? ನೀ ಸೀಳಿದ ರೇಖೆಯನಾರು ಮೀರಬಹುದಯ್ಯಾ ? ಚೆನ್ನಮಲ್ಲಿಕಾರ್ಜುನಯ್ಯಾ ನೀನು ಕಳುಹಿದ ಸೆರೆಗೆ ಮಾರುವೋಗದಿರ್ದಡೆ ಎನ್ನಿಚ್ಚೆಯ ಅಯ್ಯಾ ?