Library-logo-blue-outline.png
View-refresh.svg
Transclusion_Status_Detection_Tool

ನೀರು ಕ್ಷೀರದಂತೆ ಕೂಡಿದ

ವಿಕಿಸೋರ್ಸ್ ಇಂದ
Jump to navigation Jump to searchPages   (key to Page Status)   


ನೀರು ಕ್ಷೀರದಂತೆ ಕೂಡಿದ ಭೇದವ
ಆರಿಗೂ ಹೇಳಲಿಲ್ಲ
ಕೇಳಲಿಲ್ಲ. ಬೆಳುಗಾರ ಬೆರಸಿ ಬೆಚ್ಚ ಬಂಗಾರಕ್ಕೆ ಸಂದುಂಟೆ ಹೇಳಾ ? ಉರಿಯುಂಡ ಕರ್ಪುರದ ಪರಿಯಂತಿರ್ದುದನು
ಇದಿರಿಂಗೆ ಕೊಂಡಾಡಿ ಹೇಳಲುಂಟೆ ? ಅದಂತಿರಲಿ
_ ನಮ್ಮ ಗುಹೇಶ್ವರಲಿಂಗದ ಕಣ್ಣಮುಂದೆ
ನಿಮ್ಮ ಧರ್ಮದಿಂದಲೊಂದು ಆಶ್ಚರ್ಯವ ಕಂಡು ಬದುಕಿದೆನು ಕಾಣಾ ಸಂಗನಬಸವಣ್ಣಾ.