ವಿಷಯಕ್ಕೆ ಹೋಗು

ನೀರೂ ನೆಳಲೂ ಇಲ್ಲದಂದು,

ವಿಕಿಸೋರ್ಸ್ದಿಂದ


Title vachana saahitya
Author Allama Prabhu
Year 1120-1160 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ನೀರೂ ನೆಳಲೂ ಇಲ್ಲದಂದು
ಷಡುಶೈವ (ದೈವ ?) ರಿಲ್ಲದಂದು. ಬ್ರಹ್ಮಾಂಡ ಭಾಂಡ ಭಾಂಡಾವಳಿಗಳಿಲ್ಲದಂದು
ಪಿಂಡಾಂಡ ಅಂಡ ಅಂಡಾವಳಿಗಳಿಲ್ಲದಂದು
ಅಖಂಡಿತ ಜ್ಯೋತಿರ್ಮಯಲಿಂಗ ಶರಣನ ಲೀಲೆಯಿಂದಾದ ಏಳು ತರದ ಗಣಪಿಂಡವಂ ಕಂಡು ಅಖಂಡಿತನಾಗಿ ಬದುಕಿದೆನಯ್ಯಾ ಗುಹೇಶ್ವರಾ.