ವಿಷಯಕ್ಕೆ ಹೋಗು

ನೀರ, ಧಾರುಣಿಯೊಳಗೆ ನಾರಿ

ವಿಕಿಸೋರ್ಸ್ದಿಂದ


Title vachana saahitya
Author Allama Prabhu
Year 1120-1160 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ನೀರ
ಧಾರುಣಿಯೊಳಗೆ ನಾರಿ ಶೃಂಗಾರವ ಮಾಡಿ
ಈರೇಳು ಭವನವನಮಳೋಕ್ಯವ ಮಾಡಿ
ಬಿಂದು ಶಕ್ತಿಯ ಭೇದ ಸಂದ ಯೋಗದ ಸುಖವ ತಂದು ಮೂರ್ತಿಗೊಳಿಸಿದವರಾರು ? ಒಂದೆರಡರ ನುಡಿಯ ಮತ್ತೊಂದು ಗ್ರಹಿಸಿತ್ತ ಕಂಡೆ. ಬಿಂದುವಿನ ರಸದ ಪರೀಕ್ಷೆಯ ಭೇದವ ಚಂದ್ರಕಾಂತದ ಗಿರಿಗೆ ಅರುಣ ಚಂದ್ರನೊಡನೆ ಇಂಬಿನಲ್ಲಿಪ್ಪ ಪರಿಯ ನೋಡಾ ! ಅಂಗಯ್ಯ ತಳದೊಳು ಮೊಲೆ ಕಂಗಳಲ್ಲಿ ಕರಸನ್ನೆಗೆಯ್ದಿಂಬಿನಲ್ಲಿ ನೆರೆವ ಸುಖ ಅಂದಿನಾದಿಯ ಪ್ರತಿಬಿಂಬ ಇಂದೆನಗೆ ತೋರಿತ್ತು. ಗುಹೇಶ್ವರನ ಶರಣ ಚನ್ನಬಸವಣ್ಣಂಗೆ ಶರಣೆನುತಿರ್ದೆನು.