ವಿಷಯಕ್ಕೆ ಹೋಗು

ನೀವಿರಿಸಿದ ಮನದಲ್ಲಿ ನಾನಂಜೆನಯ್ಯಾ,

ವಿಕಿಸೋರ್ಸ್ದಿಂದ
ಲೇಖಕರು: ಬಸವಣ್ಣ
ಶೀರ್ಷಿಕೆ: vachana saahitya
ವರ್ಷ: 1191 AD
ಪ್ರಕಾಶಕರು: anubhava mantapa
ಮೂಲ: vachana saahitya

ನೀವಿರಿಸಿದ ಮನದಲ್ಲಿ ನಾನಂಜೆನಯ್ಯಾ
ಮನವು ಮಹಾಘನಕ್ಕೆ ಶರಣುಗತಿವೊಕ್ಕುದಾಗಿ. ನೀವಿರಿಸಿದ ಧನದಲ್ಲಿ ನಾನಂಜೆನಯ್ಯಾ
ಧನವು ಸತಿಸುತಮಾತಾಪಿತರಿಗೆ ಸವೆಯದಾಗಿ. ನೀವಿರಿಸಿದ ತನುವಿನಲ್ಲಿ ನಾನಂಜೆನಯ್ಯಾ
ತನುವು ಸರ್ವಾರ್ಪಿತದಲ್ಲಿ ನಿಯತಪ್ರಸಾದಭೋಗಿಯಾಗಿ. ಇದು ಕಾರಣ
ವೀರಧೀರಸಮಗ್ರನಾಗಿ ನಿಮಗಾನಂಜೆ
ಕೂಡಲಸಂಗಮದೇವಾ.