ನುಡಿಗೆಡೆಗೊಡದ ಘನವ ಹಿಡಿದು

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ನುಡಿಗೆಡೆಗೊಡದ ಘನವ ಹಿಡಿದು ಒಡಬಂದಿಯಾಳು. ಎಡೆಯಿಲ್ಲದ ಪರಿಪೂರ್ಣದೊಳಗೆ ನಡೆನುಡಿಗೆಟ್ಟಳು. ತನ್ನ ನಿಲುಕಡೆಯ ನಿಜವ ತಾನರಿಯದಂತೆ ಎನ್ನಿಂದ ಕೇಳಿ ಸ್ವಯವಾದಳು. ಗುಹೇಶ್ವರಲಿಂಗ ಸಾಕ್ಷಿಯಾಗಿ
ಮಹಾದೇವಿಯಕ್ಕನ ನಿಲವ ಕೊಂಡಾಡುವುದಕ್ಕೆ ತೆರಹಿಲ್ಲ ಕಾಣಾ ಮಡಿವಾಳಯ್ಯ.