ನುಡಿದಡೆ ಮುತ್ತಿನ ಹಾರದಂತಿರಬೇಕು. ನುಡಿದಡೆ ಮಾಣಿಕ್ಯದ ದೀಪ್ತಿಯಂತಿರಬೇಕು. ನುಡಿದಡೆ ಸ್ಫಟಿಕದ ಸಲಾಕೆಯಂತಿರಬೇಕು. ನುಡಿದಡೆ ಲಿಂಗ ಮೆಚ್ಚಿ ಅಹುದಹುದನಬೇಕು. ನುಡಿಯೊಳಗಾಗಿ ನಡೆಯದಿದ್ದಡೆ ಕೂಡಲಸಂಗಮದೇವನೆಂತೊಲಿವನಯ್ಯಾ