ನೆನೆದೆಹೆನೆಂದಡೆ ಮನಕ್ಕೆ ಸಿಲುಕದು,
ಗೋಚರ
ಲೇಖಕರು: ಅಲ್ಲಮ ಪ್ರಭು
ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ನೆನೆದೆಹೆನೆಂದಡೆ ಮನಕ್ಕೆ ಸಿಲುಕದು
ಅರಿದೆಹೆನೆಂದಡೆ ಕುರುಹಿಂಗೆ ಬಾರದು
ಕಂಡೆಹೆನೆಂದಡೆ ಮೂರ್ತಿಯಲ್ಲ. ತನುವಿನೊಳಗಿಲ್ಲದ ಮನದೊಳಗಿಲ್ಲದ ಘನವು
ನಿಮ್ಮ ಮನಕ್ಕೆ ವೇದ್ಯವಾದ ಪರಿ
ಎಂತಯ್ಯಾ ? ಗುಹೇಶ್ವರನೆಂಬ ಲಿಂಗವು ಜಗದ ಕಣ್ಣಿಂಗೆ ಕತ್ತಲೆಯ ಕವಿಸಿ ತನ್ನ ತಪ್ಪಿಸಿಕೊಂಡಿಪ್ಪ [ಆ] ಭೇದ ನಿನ್ನೊಳಗಡಗಿದ ಪರಿ ಎಂತು ಹೇಳಾ ಸಂಗನಬಸವಣ್ಣಾ ?