ನೆನೆ ಎಂದಡೆ ಏನ
ಗೋಚರ
ಲೇಖಕರು: Allama Prabhu
ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya
ನೆನೆ ಎಂದಡೆ ಏನ ನೆನೆವೆನಯ್ಯಾ? ಎನ್ನ ಕಾಯವೆ ಕೈಲಾಸವಾಯಿತ್ತು
ಮನವೆ ಲಿಂಗವಾಯಿತ್ತು
ತನುವೆ ಸೆಜ್ಜೆಯಾಯಿತ್ತು. ನೆನೆವಡೆ ದೇವನುಂಟೆ? ನೋಡುವಡೆ ಭಕ್ತನುಂಟೆ? ಗುಹೇಶ್ವರಲಿಂಗ ಲೀಯವಾಯಿತ್ತು.