ನೆಲದ ಬೊಂಬೆಯ ಮಾಡಿ,

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ನೆಲದ ಬೊಂಬೆಯ ಮಾಡಿ
ಜಲದ ಬಣ್ಣವನುಡಿಸಿ
ಹಲವು ಪರಿಯಾಶ್ರಿ(ಶ್ರ?)ಮದಲ್ಲಿ ಉಲಿವ ಗೆಜ್ಜೆಯ ಕಟ್ಟಿ ವಾಯುವನಲನ ಸಂಚಕ್ಕೆ ಅರಳೆಲೆಯ ಶೃಂಗಾರವ ಮಾಡಿ ಆಡಿಸುವ ಯಂತ್ರವಾಹಕನಾರೊ ? ಬಯಲ ಕಂಬಕ್ಕೆ ತಂದು ಸಯವೆಂದು ಪರವ ಕಟ್ಟಿದಡೆ ಸಯವದ್ವಯವಾಯಿತ್ತು_ಏನೆಂಬೆನು ಗುಹೇಶ್ವರಾ !